



ಕುಂದಾಪುರ: ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ.: ಸತತ ಎರಡೂ ದಿನಗಳಿಂದಲೂ ನೀರುಪಾಲಾದ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸಲಾಗಿತ್ತು ತ್ರಾಸಿ ಹೋಲಿಕ್ರಾಸ್ ಮಹೇಂದ್ರ (24) ನೀರುಪಾಲಾದ ಹುಡುಗ. ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ ಸ್ನೇಹಿತ ಶರತ್ ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದ. ಅದೇ ಸಂದರ್ಭದಲ್ಲಿ ನೀರಿನ ಸೆಳೆತ ಹೆಚ್ಚಾಗುತಿತ್ತು.ಆಶಿಕ್ ನನ್ನು ಸ್ಥಳೀಯರಾದ ರತ್ನಾಕರ್ ಕಾಂಚನ್ ಮತ್ತು ಯೋಗೇಂದ್ರ ಕಾಂಚನ್ ರಕ್ಷಿಸಿದ್ದಾರೆ. ನೀರುಪಾಲಾದ ಯುವಕನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳಿಯರು ಹುಡುಕಾಟ ನಡೆಸಿದ್ದರುರ. ಗಂಗೊಳ್ಳಿ ಠಾಣಾ ಸಿಬ್ಬಂದಿ ಪರಿಶೀಲನೆ ನಡೆಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.