



ಕುಂದಾಪುರ: ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮದಿಂದ ಶುಕ್ರವಾರ ನಡೆಯಿತು.
ರಥೋತ್ಸವದ ಅಂಗವಾಗಿ ನ.12ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಶುಕ್ರವಾರ ಬೆಳಿಗ್ಗೆ 11-50ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾರಥೋತ್ಸವ ನಡೆಯಿತು.









ಕೋಟೇಶ್ವರ ರಥೋತ್ಸವದ ಸಂದರ್ಭದಲ್ಲಿ ಗರುಡ ಪ್ರದಕ್ಷಣೆ ಸಹಜ ಪ್ರಕ್ರಿಯೆ. ಎಷ್ಟೋ ಜನ ಭಕ್ತರು ಗರುಡ ಬರುವುದನ್ನೇ ಕಾದಿರುತ್ತಾರೆ. ಇವತ್ತು ಕೂಡಾ ರಥಕ್ಕೆ ಗರುಡ ಪ್ರದಕ್ಷಣೆ ಬಂದಿರುವ ದೃಶ್ಯವನ್ನು ನೋಡಿ ಭಕ್ತರು ಪುಳಕಿತರಾದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎಂ.ಪ್ರಭಾಕರ ಶೆಟ್ಟಿ, ದೇವಳದ ತಂತ್ರಿಗಳಾಗಿ ಪ್ರಸನ್ನ ಕುಮಾರ್ ಐತಾಳ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಗಣೇಶ್ ಗೌಡ, ಸಮಿತಿ ಸದಸ್ಯರಾಗಿ ಎಸ್.ರಾಘವೇಂದ್ರ ರಾವ್ ನೇರಂಬಳ್ಳಿ, ಸುರೇಶ್ ಶೇರೆಗಾರ್ ಬೀಜಾಡಿ, ಚಂದ್ರಿಕಾ ಧನ್ಯ ಕೋಟೇಶ್ವರ, ಶಾರದಾ ಮೂಡುಗೋಪಾಡಿ, ಮಂಜುನಾಥ ಆಚಾರ್ಯ, ಭಾರತಿ, ಹಾಗೂ ಅರ್ಚಕರು, ಸಿಬ್ಬಂದಿ ವರ್ಗ ಹಾಗು ಸಮಸ್ತ ಕೋಟೇಶ್ವರ ಗ್ರಾಮಸ್ಥರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
ಕೊಡಿ ಹಬ್ಬ
ಕೋಟೇಶ್ವರದ ಸುತ್ತುಮುತ್ತಲಿನ ನವವಿವಾಹಿತರು ಬದುಕಿನ ಕುಡಿಯೊಡೆವ ಕ್ಷೇತ್ರವೆಂದೇ ನಂಬುಗೆ ತಳೆದವರಾಗಿ ಕೋಟಿತೀರ್ಥದಲ್ಲಿ ಸ್ನಾನಮಾಡಿ ದೇವರ ದರ್ಶನ ಪಡೆದು ಕಬ್ಬಿನ ಕೊಡಿಯನ್ನು ಒಟ್ಟಿಗೆ ಕೊಂಡೊಯ್ಯುತ್ತಾರೆ.
ಸುತ್ತಕ್ಕಿ ಸೇವೆ:
ಸುಮಾರು 5 ಎಕರೆ ವಿಸ್ತೀರ್ಣದ ವಿಶಾಲವಾದ ಈ ಕೆರೆಗೆ ಸುತ್ತಕ್ಕಿ ತಳಿದರೆ ತಮ್ಮ ಇಷ್ಟಾರ್ಥ ಈಡೇರುತ್ತದೆ ಎಂಬ ನಂಬಿಕೆಯಿಂದ ಹಬ್ಬದ ದಿನ ಬೆಳಿಗ್ಗೆ 3 ಗಂಟೆಯಿಂದಲೇ ದೂರ ದೂರದ ಹರಕೆ ಹೊತ್ತ ಭಕ್ತಾಭಿಮಾನಿಗಳು ಕೆರೆಯಲ್ಲಿ ತೀರ್ಥ ಸ್ನಾನ ಮಾಡಿ ಮನೆಯಲ್ಲಿಯೇ ಬೆಳೆದ ಬತ್ತದ ಅಕ್ಕಿಯನ್ನು ಈ ಕೆರೆಯ ಸುತ್ತ ತಳಿಯುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.