logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಟ್ರೆಂಡಿಂಗ್
share whatsappshare facebookshare telegram
7 Oct 2024
post image

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ ಬಾಲಕಿಯರ ಟೆನ್ನಿಕ್ವಾಯ್ಟ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶು ಖಾರ್ವಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ರೋನಿತ್ ಪೂಜಾರಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

ಈ ಇಬ್ಬರು ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.