



ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ ಅರಸಮ್ಮಕಾನು ಇಲ್ಲಿ ಜನವರಿ 12 ರಂದು ಸ್ವಾಮಿ ವಿವೇಕಾನಂದ ಜಯಂತಿಯ ಸಲುವಾಗಿ ಶಾಲೆಯ ಹಳೆ ವಿದ್ಯಾರ್ಥಿಗಳು ಸುಮಾರು ಮುನ್ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕೊಡುಗೆಯಾಗಿ ನೀಡಿದರು... ಯುವದಿನದ ಈ ಸಂಭ್ರಮದ ರೂವಾರಿ ಹಳೆ ವಿದ್ಯಾರ್ಥಿ ವೆಂಕಟರಮಣ ಪೂಜಾರಿ ಇವರ ನೇತೃತ್ವದಲ್ಲಿ ಪುಸ್ತಕಗಳನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು... ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಯುತ ವಸಂತ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿದ್ದು

ಈ ಶುಭಸಂದರ್ಭದಲ್ಲಿ ಶಾಲೆಯ ನಿವೃತ್ತ ಶಿಕ್ಷಕರಾದ ಶ್ರೀಯುತ ಅಣ್ಣಯ್ಯ ಶೆಟ್ಟಿ ಶ್ರೀಯುತ ಶಿವರಾಮಶೆಟ್ಟಿ ಹಾಗೂ ಶ್ರೀಯುತ ಅನಂತ ತಂತ್ರಿ ಅವರು ಉಪಸ್ಥಿತರಿದ್ದರು ಹಾಗೂ ನಿವೃತ್ತ ಅರಣ್ಯಾಧಿಕಾರಿಗಳಾದ ಶ್ರೀಯುತ ರತ್ನಾಕರ ಶೆಟ್ಟಿ ಮತ್ತು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಯುತ ಉದಯಕುಮಾರ್ ಶೆಟ್ಟಿ ಹಾಗೂ ಶಾಲಾ ಆರ್ಥಿಕ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಸುಧಾಕರ್ ಶೆಟ್ಟಿ ಇವರ ಉಪಸ್ಥಿತಿ ಯೊಂದಿಗೆ ಜೊತೆಗೆ ಕೋವಿಡ್ ಮಾರ್ಗಸೂಚಿಯಂತೆ ಕಾರ್ಯಕ್ರಮ ಸರಳವಾಗಿ ನಡೆಸಿ ಕಾರ್ಯಕ್ರಮ ಯಶಸ್ವಿಯಾಯಿತು. ಈ ಶುಭಸಂದರ್ಭದಲ್ಲಿ ಹೆಮ್ಮೆಯ ಹಳೆ ವಿದ್ಯಾರ್ಥಿಗಳು,ಪೋಷಕವ್ರಂದ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.... ಈ ಒಂದು ಕಾರ್ಯಕ್ಕೆ ಹಿರಿಯರು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು ಸರಕಾರಿ ಶಾಲೆಯಲ್ಲಿ ಕಲಿತರೆ ಸಂಸ್ಕಾರ ಹೇಗೆ ಸಿಗುವುದೆಂದು ನಮ್ಮ ಊರಿನ ಹಳೆ ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಾರೆ ಎಂದು ಹೆಮ್ಮೆಯನ್ನು ವ್ಯಕ್ತಪಡಿಸಿದರು..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.