



ಕುಂದಾಪುರ: ತಾಲೂಕಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಂಕರನಾರಾಯಣ ಗ್ರಾಮದ ಯುವತಿ ಸೆ.29ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಶಂಕರನಾರಾಯಣ ಗ್ರಾಮದ ಶಿಲ್ಪಾ(25) ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ವರ್ಷ ಸಹೋದರ ಸಾವನಪ್ಪಿದ್ದು, ಇದರಿಂದ ಇನ್ನಷ್ಟು ಖನ್ನತೆಗೆ ಒಳಗಾಗಿದ್ದರು. ಸೆ.29ರಂದು ಮನೆಯ ಒಳಗಿನ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರನ್ನು ಕೂಡಲೆ ಶಂಕರನಾರಾಯಣ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದ್ದಾಗಿ ತಿಳಿಸಿದ್ದಾರೆ ಎಂದು ತಂದೆ ಸುಬ್ಬ(48) ರವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.