



ಕುಂದಾಪುರ: ಪಾದಾಚಾರಿ ಮಹಿಳೆಯೋರ್ವಳು ಹೆದ್ದಾರಿಯ ಆಚೆ ಬದಿಗಿರುವ ಮನೆಗೆ ಹಾಲು ಕೊಟ್ಟು ವಾಪಾಸು ಹೆದ್ದಾರಿ ದಾಟಿ ಬರುತ್ತಿದ್ದ ವೇಳೆ ಬುಲೆಟ್ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಾವನ್ನಪ್ಪಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ಮಸ್ಕಿ ಮಹಾಗಣಪತಿ ದೇವಸ್ಥಾನದ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನಾವುಂದ ನಿವಾಸಿ ಶಾಂತಾ(53) ಎಂದು ಗುರುತಿಸಲಾಗಿದೆ. ಶಾಂತಾ ಇಲ್ಲಿನ ಶಕುಂತಲಾ ಎಂಬುವರ ಮನೆಗೆ ಹಾಲು ಕೊಟ್ಟು ಡಿವೈಡರ್ ದಾಟಿ ನಡೆದುಕೊಂಡು ಹೋಗುತ್ತಿದ್ದರು. ಇರ್ಫಾನ್ ಎಂಬಾತ ಹಿಮಾಲಯ ಬುಲೆಟ್ ನಲ್ಲಿ ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ. ಇಬ್ಬರೂ ರಸ್ತೆಗೆ ಬಿದ್ದಿದ್ದು, ಶಾಂತಾ ಗಂಭೀರ ಗಾಯಗೊಂಡಿದ್ದರು.
ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.