



ಕುಂದಾಪುರ : ಸೆಪ್ಟೆಂಬರ್ 28 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ರನ್ನರ್ ಅಪ್ ಚಾಂಪಿಯನ್ ಶಿಪ್ ತನ್ನದಾಗಿಸಿಕೊಂಡಿದೆ.ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ ಕುಸ್ತಿ ಪಟು ಕೃಷ್ಣ ಉಪಸ್ಥಿತರಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.