



ಕುಂದಾಪುರ: ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ರಾಜ್ಯದಾದ್ಯಂತ ಲಕ್ಷಾಂತರ ಜನರು ಏಕಕಾಲಕ್ಕೆ ಕನ್ನಡ ಗೀತಾ ಗಾಯನದಲ್ಲಿ ಪಾಲ್ಗೊಂಡಿದ್ದು, ಕುಂದಾಪುರದಲ್ಲೂ ಯಶಸ್ವಿಯಾಗಿ ನಡೆಯಿತು.
ಕುಂದಾಪುರ ಪುರಸಭೆಯ ವತಿಯಿಂದ ಕೋಡಿ ಬ್ಯಾರೀಸ್ ಸಮೂಹ ಸಂಸ್ಥೆಯಲ್ಲಿ ಆಯೋಜಿಸಲಾದ ಗೀತಾ ಗಾಯನದಲ್ಲಿ ಖುದ್ದು ಪುರಸಭೆಯ ಮುಖ್ಯಾಧಿಕಾರಿ ಹೆಜ್ಜೆ ಹಾಕಿ ಸಂಭ್ರಮಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಹಾಡಿಗೆ ಹೆಜ್ಜೆ ಹಾಕಿದ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿಯವರೊಂದಿಗೆ ವಿದ್ಯಾರ್ಥಿಗಳೂ ಸೇರಿ ಹೆಜ್ಜೆ ಹಾಕಿ ಸಂಭ್ರನಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ನನ್ನ ವಿದ್ಯಾರ್ಥಿ ಜೀವನದ ಕ್ಷಣ ಮರಳಿ ಬಂದ ಅನುಭವ ಆಯಿತು. ಸುಮಾರು ನಲವತ್ತೈದು ವರ್ಷಗಳ ಬಳಿಕ ಹೆಜ್ಜೆ ಹಾಕಿರುವುದು ಖುಷಿ ನೀಡಿದೆ. ಪುರಸಭೆಯ ಪ್ರತಿಯೊಂದು ಕಾರ್ಯಕ್ಕೂ ಬ್ಯಾರೀಸ್ ಸಮೂಹ ಸಂಸ್ಥೆ ಸಹಕಾರ ನೀಡುತ್ತಾ ಬಂದಿದೆ. ಮುಂದೆಯೂ ನಿಮ್ಮ ಸಹಕಾರ ಹೀಗೆಯೇ ಇರಲಿ ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.