logo
WhatsApp Image 2026-04-02 at 14.46.04.jpeg
hindalco everlast.jpeg

ಕುಂಜಿಬೆಟ್ಟು: ಮನೆಯ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಟ್ರೆಂಡಿಂಗ್
share whatsappshare facebookshare telegram
13 Dec 2022
post image

ಉಡುಪಿ:

ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿದ ಕಳ್ಳರು‌ ಗೋದ್ರೇಜ್‌ ಲಾಕರ್‌ ನಲ್ಲಿಟ್ಟಿದ್ದ 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು‌ ಹೋಗಿರುವ ಘಟನೆ ಉಡುಪಿ ಕುಂಜಿಬೆಟ್ಟು ಎಂಬಲ್ಲಿ ನಡೆದಿದೆ. ಕುಂಜಿಬೆಟ್ಟು‌ ನಿವಾಸಿ 50ವರ್ಷದ ವೈಷ್ಣವಿ ಆಚಾರ್ಯ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರ‌ ಮನೆಗೆ ಡಿ.11ರ ರಾತ್ರಿಯಿಂದ ಡಿ.12ರ ಬೆಳಿಗ್ಗಿನ‌ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ನುಗ್ಗಿ, ಗೋದ್ರೇಜ್‌ ಲಾಕರ್‌ ನಲ್ಲಿಟ್ಡಿದ್ದ ಡೈಮಂಡ್‌ ಉಂಗುರ-1, 20 ಗ್ರಾಂ ತೂಕದ ಚಿನ್ನದ ಜುಮುಕಿ-2, 8 ಗ್ರಾಂ ತೂಕದ ಚಿನ್ನದ ಕಾಯಿನ್‌-1, ಬೆಳ್ಳಿಯ ತಟ್ಟೆಗಳು-2 ಹಾಗೂ ಚಿನ್ನದ ಲೇಪನ ಇರುವ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 3,48 ಲಕ್ಷ ರೂ. ಆಗಿದೆ ಎಂದು ದೂರಿನಲ್ಲಿ‌ ತಿಳಿಸಲಾಗಿದೆ . ಈ ಬಗ್ಗೆ  ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.