logo
WhatsApp Image 2026-04-02 at 14.46.04.jpeg
hindalco everlast.jpeg

ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ

ಟ್ರೆಂಡಿಂಗ್
share whatsappshare facebookshare telegram
12 Dec 2023
post image

ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜ. 5, 6, 7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024' ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಯಿತು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 35ನೇ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದ್ದು, ಈಗ ರಾಜ್ಯ ಮಟ್ಟದ ಕ್ರಿಕೇಟ್ ಕ್ರೀಡಾಕೂಟವನ್ನ ಸಂಘಟಿಸಲಾಗುತ್ತಿದೆ ಎಂಬುವುದನ್ನು ಅವರ ಗಮನಕ್ಕೆ ತರಲಾಯಿತು.

ಲಾಂಛನ ಅನಾವರಣ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ್ ರೈ. ಕೆ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪದಾಧಿಕಾರಿಗಳಾದ, ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.