



ಮಂಗಳೂರು: ಜಿಲ್ಲೆಯಲ್ಲಿ ಭಾರಿ ಸುದ್ದಿಗೆ ಕಾರಣವಾಗಿದ್ದ ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ತಿಂಗಳ ಹಿಂದೆ ನಡೆದ ನವಜಾತ ಶಿಶು 'ಅದಲು-ಬದಲು' ಪ್ರಕರಣದ ಕುರಿತು ಕಾನೂನು ಹೋರಾಟ ನಡೆಯುತ್ತಿರುವ ಹಂತದಲ್ಲೇ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಲೇಡಿಗೋಶನ್ ಆಸ್ಪತ್ರೆಯಲ್ಲಿ ಅ.15ರಂದು ಕುಂದಾಪುರ ಮೂಲದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮಗು ಅದಲು-ಬದಲು ಮಾಡಲಾಗಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದರು.
ಆಸ್ಪತ್ರೆಯ ಸಿಬ್ಬಂದಿ ಮೊದಲು ಮಗು ಹೆಣ್ಣು ಎಂದು ನಮಗೆ ಹೇಳಿದ್ದರು. ದಾಖಲೆಗಳಲ್ಲಿ ಕೂಡ ಹೆಣ್ಣು ಮಗು ಎಂದೇ ನಮೂದಿಸಿದ್ದರು. ಆದರೆ ನಮಗೆ ಗಂಡು ಮಗುವನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಮಗು ಹಾಗೂ ಹೆತ್ತವರ ಡಿಎನ್‌ಎ ಪರೀಕ್ಷೆ ನಡೆಸಿ ಮಾದರಿಯನ್ನು ಹೈದರಾಬಾದಿಗೆ ಕಳುಹಿಸಿಕೊಡಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಮಗು ಮೃತಪಟ್ಟಿದೆ. ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.