logo
Udupi Express  (1400px x 300px).jpg
SHARADA TECHERS.jpeg
hindalco everlast.jpeg

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ..!

ಟ್ರೆಂಡಿಂಗ್
share whatsappshare facebookshare telegram
19 Nov 2024
post image

ಉಡುಪಿ, ನ.19: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಿಮಿತ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನವೆಂಬರ್ 19 ರಿಂದ 21 ರ ವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ಈ ಕೆಳಗಿನಂತೆ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.

ನ.19 ರಂದು ಬಂಡಿಯಲ್ಲಿ ಗರುಡ ವಾಹನ ಉತ್ಸವ, ಕೆರೆದೀಪ ಪ್ರಯುಕ್ತ ಅಂದು ರಾತ್ರಿ 8 ಗಂಟೆಯಿ೦ದ 12 ರ ವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿ೦ದ ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿ೦ದ ಕಲ್ಲೊಟ್ಟೆ, ಮಾರ್ಕೇಟ್ ಮಾರ್ಗವಾಗಿ ಬಸ್‌ನಿಲ್ದಾಣ ಪ್ರವೇಶಿಸಬೇಕು ಹಾಗೂ ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿ೦ದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್‌ವರೆಗಿನ ಮಾರ್ಗದಲ್ಲಿ ದ್ವಿ-ಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.

ನ.20 ರಂದು ಲಕ್ಷದೀಪೋತ್ಸವ ವನಭೋಜನ ಉತ್ಸವ ಇರುವುದರಿಂದ ಅಂದು ಬೆಳಗ್ಗೆ 10 ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ನ. 21 ರಂದು ಓಕುಳಿ ಹಾಗೂ ಪಲ್ಲಕ್ಕಿ ಉತ್ಸವ ಇರುವುದರಿಂದ ಅಂದು ಸಂಜೆ 4 ಗಂಟೆಯಿ೦ದ ಮರುದಿನ ಬೆಳಗ್ಗೆ 4 ಗಂಟೆಯವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿಒದ ಹಿರಿಯಂಗಡಿ, ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಬಸ್‌ಗಳು ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿ೦ದ ಕಲ್ಲೊಟ್ಟೆ ಮಾರ್ಕೇಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿ೦ದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್‌ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು. ಮೇಲ್ಕಂಡ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2024-10-11 at 1.21.20 PM - Copy.jpeg
WhatsApp Image 2024-10-09 at 8.05.11 PM.jpeg
WhatsApp Image 2024-09-19 at 4.31.45 PM.jpeg
WhatsApp Image 2024-04-29 at 2.40.38 PM.jpeg
sharada.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.