logo
WhatsApp Image 2026-04-02 at 14.46.04.jpeg
hindalco everlast.jpeg

ಸಕಲೇಶಪುರ ಸೇರಿದಂತೆ ಹಲವು ಕಡೆ ಭೂಕುಸಿತ ಭೀತಿ: 16 ಅಪಾಯದ ಪ್ರದೇಶಗಳ ಗುರುತು,

ಟ್ರೆಂಡಿಂಗ್
share whatsappshare facebookshare telegram
18 Jul 2026
post image

ಹಾಸನ: ಜಿಲ್ಲೆಯ ಮಲೆನಾಡು ಭಾಗ, ವಿಶೇಷವಾಗಿ ಸಕಲೇಶಪುರ ತಾಲ್ಲೂಕಿನಲ್ಲಿ ಸಂಭವನೀಯ ಭೂಕುಸಿತದ ಆತಂಕ ಹೆಚ್ಚಾಗಿದ್ದು, ಜಿಲ್ಲಾಡಳಿತ 16 ಭೂಕುಸಿತ ಸಂಭವಿಸಬಹುದಾದ ಸ್ಥಳಗಳು ಹಾಗೂ 4 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿದೆ. ಸುರಕ್ಷತಾ ದೃಷ್ಟಿಯಿಂದ ಈ ಪ್ರದೇಶಗಳ ನಿವಾಸಿಗಳಿಗೆ ಮನೆ ಖಾಲಿ ಮಾಡುವಂತೆ ಸೂಚನೆ ನೀಡಲಾಗಿದೆ.

ಆದರೆ, ಕಳೆದ ಐವತ್ತು ವರ್ಷಗಳಿಂದ ಈ ಪ್ರದೇಶಗಳಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುತ್ತಿರುವ ಕುಟುಂಬಗಳು, "ಮೊದಲು ಬದಲಿ ಜಾಗ ಅಥವಾ ಸೂಕ್ತ ಪರಿಹಾರ ನೀಡಿ, ಬಳಿಕವೇ ಸ್ಥಳಾಂತರವಾಗುತ್ತೇವೆ" ಎಂದು ಪಟ್ಟು ಹಿಡಿದಿವೆ. ಬದಲಿ ವ್ಯವಸ್ಥೆ ಇಲ್ಲದೆ ಮನೆ ತೊರೆಯುವುದಿಲ್ಲ ಎಂದು ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ.

ಪ್ರತಿ ವರ್ಷ ಮಳೆಗಾಲದಲ್ಲಿ ಸಕಲೇಶಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಪ್ರವಾಹದಿಂದ ಅನಾಹುತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಅಪಾಯದ ಪ್ರದೇಶಗಳನ್ನು ಗುರುತಿಸಿದೆ. ಆದರೆ, ಮನೆ ಕಳೆದುಕೊಳ್ಳುವ ಕುಟುಂಬಗಳಿಗೆ ಸರ್ಕಾರದಿಂದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದಿರುವುದಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಸಿಮೆಂಟ್ ಮಂಜು, ಅಪಾಯದ ಪ್ರದೇಶಗಳಲ್ಲಿ ವಾಸಿಸುವವರಿಗೆ ಸೂಕ್ತ ಪರಿಹಾರ ಅಥವಾ ಬದಲಿ ಜಾಗ ಒದಗಿಸಿ ಬಳಿಕವೇ ಮನೆ ತೆರವುಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಲ್ಲವಾದರೆ ಮಳೆಗಾಲದಲ್ಲಿ ಜೀವಹಾನಿ ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಒಟ್ಟಾರೆ, ಜೀವ ರಕ್ಷಣೆಗಾಗಿ ಸ್ಥಳಾಂತರ ಅಗತ್ಯವಿದ್ದರೂ, ಸೂಕ್ತ ಪರಿಹಾರ ಮತ್ತು ಪುನರ್ವಸತಿ ಇಲ್ಲದೆ ಮನೆ ಖಾಲಿ ಮಾಡುವಂತೆ ಒತ್ತಾಯಿಸುವುದು ನ್ಯಾಯಸಮ್ಮತವಲ್ಲ ಎಂಬುದು ನಿವಾಸಿಗಳ ಅಭಿಪ್ರಾಯವಾಗಿದೆ. ಸರ್ಕಾರ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.