



ಬೆಂಗಳೂರು: ಹೃದಯಾಘಾತದಿಂದ ನಿಧನಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಯ ಪಕ್ಕದಲ್ಲೇ ಈಡಿಗ ಸಂಪ್ರದಾಯದಂತೆ ನಡೆದಿದೆ.ಪೊಲೀಸ್ ಬ್ಯಾಂಡ್, ರಾಷ್ಟ್ರಗೀತೆ ನುಡಿಸುವುದರೊಂದಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಪುನೀತ್ ಪಾರ್ಥೀವ ಶರೀರರಕ್ಕೆ ಪೊಲೀಸರು ಗೌರವವಂದನೆ ಸಲ್ಲಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದನಾಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.