



ಬೆಂಗಳೂರು: ಮೊದಲ ಹಂತದಲ್ಲಿ 1,145 ಶಾಲೆಗಳ ಮಕ್ಕಳಲ್ಲಿ ಮೂಲ ಗಣಿತ ತತ್ವಗಳು ಹಾಗೂ ಕನ್ನಡ–ಇಂಗ್ಲಿಷ್ ಭಾಷಾ ಸಾಮರ್ಥ್ಯ ಬೆಳೆಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೋಧನೆ ಒಳಗೊಂಡ ಈ ಯೋಜನೆ ಅನುಷ್ಠಾನಕ್ಕಾಗಿ ಇಲಾಖೆಯ ಅಧಿಕಾರಿಗಳು ಎಕ್‌ಸ್ಟೆಪ್ ಫೌಂಡೇಶನ್ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ.
ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದ ‘ಕಲಿಕಾ ದೀಪ’ ಕಾರ್ಯಕ್ರಮದ ಭಾಗವಾದ ಯೋಜನೆಯನ್ನು ಕೊಪ್ಪಳ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2024-25ನೇ ಸಾಲಿನಲ್ಲೇ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಎರಡೂ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಇತರೆ ಎಲ್ಲ ಶಾಲೆಗಳಲ್ಲೂ ಹಂತಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ.
ಯೋಜನೆಯಿಂದ 1,44,062 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದ್ದು, ₹1.38 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಇಂಟರ್‌ನೆಟ್ ಶುಲ್ಕ, ಹೆಡ್ ಫೋನ್‌ಗಳ ಖರೀದಿ ಮತ್ತು ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಲು ಅನುದಾನ ಬಳಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.