



ಉಡುಪಿ: ವ್ಯಕ್ತಿಯಲ್ಲಿರುವ ಶಕ್ತಿಯನ್ನು ಗುರುತಿಸುವ ಕೆಲಸ ಮಾಡಬೇಕೆಂದು ಅಬ್ದುಲ್ ಕಲಾಂ ಯಾವಾಗಲೂ ಹೇಳುತ್ತಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ಹಾಗೂ ಎಂಜಿಎಂ ಕಾಲೇಜು ಉಡುಪಿ ಸಹಕಾರದೊಂದಿಗೆ ಮೇ 8 ಸೋಮವಾರದಂದು ಎಂಜಿಎಂ ಕಾಲೇಜಿನಲ್ಲಿ ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕೆ .ಜಯಪ್ರಕಾಶ್ ರಾವ್ ಉಪನ್ಯಾಸ ನೀಡುತ್ತಾ ಮಾತನಾಡಿದರು.
ಅವರೊಂದಿಗಿನ ಏಳು ವರ್ಷದ ಒಡನಾಟಗಳನ್ನು ನೆನಪಿಸಿಕೊಳ್ಳುತ್ತಾ ರಾಕೆಟ್ ತಂತ್ರಜ್ಞಾನದ ಮೇರು ವ್ಯಕ್ತಿ ಕಲಾಂ, ಅತ್ಯಂತ ಸರಳ ವ್ಯಕ್ತಿತ್ವದ ಅವರು ಹೊಸ ತಂತ್ರ ಜ್ಞಾನಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಸರಳ ಜೀವನವನ್ನು ನಡೆಸುತ್ತಾ ನಮಗೆಲ್ಲರಿಗೂ ಮಾದರಿಯಾಗಿದ್ದರು ಎಂದರು.
ಕಾಲೇಜು ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಯನ್ನಾಡಿದರು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ದಾನಿಗಳಾದ ಭವಾನಿ ವಿ. ಶೆಟ್ಟಿ, ಶಾರದಾ ಶೆಟ್ಟಿ ಉಪಸ್ಥಿತರಿದ್ದರು.
ಕಸಾಪ ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಹೆಚ್ ಪಿ. ಸ್ವಾಗತಿಸಿ, ಪ್ರಸ್ತಾಪಿಸಿದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ನಿರೂಪಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಪುತ್ತಿ ವಸಂತ್ ಕುಮಾರ್ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.