logo
WhatsApp Image 2026-04-02 at 14.46.04.jpeg
hindalco everlast.jpeg

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
6 Feb 2022
post image

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ (93) ಅವರು ಇಂದು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವರಿಗೆ ಕೊರೊನಾ ಸೋಂಕು ತಗುಲಿ ಕಳೆದ ಒಂದು ತಿಂಗಳಿನಿಂದ ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾದೊಂದಿಗೆ ನ್ಯೂಮೋನಿಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಗಂಭೀರವಾಗಿದೆ ಎಂದು ನಿನ್ನೆ ವೈದ್ಯರು ಮಾಹಿತಿ ನೀಡಿದ್ದರು.

ಇದೀಗ ಚಿಕಿತ್ಸೆ ಫಲಕಾರಿಯಾಗದೆ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾರತದ ನೈಟಿಂಗೇಲ್ ಎಂದೇ ಕರೆಸಿಕೊಳ್ತಿದ್ದ ಲತಾ ಮಂಗೇಶ್ಕರ್ ಅವರು ತಮ್ಮ 13ನೇ ವಯಸ್ಸಿಗೆ ಸಿನಿಮಾದಲ್ಲಿ ಹಾಡುವುದನ್ನ ಪ್ರಾರಂಭಿಸಿದ್ದರು. ಇದುವರೆಗೂ 36ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿರುವ ಗಾನ ಕೋಗಿಲೆ, 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.