



ಕೊಪ್ಪಳ: ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಮಮಂದಿರ ಉದ್ಘಾಟನೆಗೆ ರಾಜ್ಯ ಸರ್ಕಾರ ರಜೆ ಘೋಷಣೆಗೆ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಹೀಗಾಗಿ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ನಾವು ಯಾಕೆ ರಜೆ ನೀಡಬೇಕು ಎಂದಿದ್ದಾರೆ.
ಇನ್ನು ರಾಮ ಮಂದಿರ ಉದ್ಘಾಟನೆಗೆ ಯಾರಿಗೆಲ್ಲ ಆಹ್ವಾನ ಬಂದಿದೆ ಗೊತ್ತಿಲ್ಲ. ಆಹ್ವಾನ ಬಂದವರು ಹೋಗಲಿ ಎಂದರು. ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿರುವುದನ್ನು ಸಮರ್ಥನೆ ಮಾಡಿ ಮಾತನಾಡಿದ ಸಿದ್ದರಾಮಯ್ಯ, ಹಳೆಯ ಪ್ರಕರಣಗಳನ್ನು ಮುಗಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ. ಅವರ ಸೂಚನೆಯಂತೆ ಪ್ರಕರಣವನ್ನು ರೀಓಪನ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.