logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜೀವರಕ್ಷಕರಿಂದ ಕಡಲತೀರದಲ್ಲಿ ಸಂಭವಿಸುವ ಅಹಿತಕರ ಘಟನೆ ತಡೆಯಲು ಸಾಧ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಟ್ರೆಂಡಿಂಗ್
share whatsappshare facebookshare telegram
16 Dec 2023
post image

ಉಡುಪಿ: ಕಡಲ ತೀರದ ವಲಯಗಳಲ್ಲಿ ಪ್ರವಾಸಿಗರ ಸುರಕ್ಷತೆಯ ಕಾರ್ಯವನ್ನು ಜೀವರಕ್ಷಕ ತಂಡದವರು ಮಾಡಲಿದ್ದು, ಇದರಿಂದ ಭವಿಷ್ಯದಲ್ಲಾಗುವ ಅಹಿತಕರ ಘಟನೆಯನ್ನು ತಡೆಯಲು ಸಾಧ್ಯವಾಗಲಿದೆ ಎಂದು ಶಾಸಕ ಯಶ್ ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ಮಲ್ಪೆಯ ಕಡಲತೀರದಲ್ಲಿ ಜೀವ ರಕ್ಷಕ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದರು.

ಕಡಲ ಸೊಬಗನ್ನು ಸವಿಯಲು ಹೊರಗಿನಿಂದ ಬರುವ ಜನರಿಗೆ ಸಮುದ್ರ ಪ್ರದೇಶದ ಆಳ, ಅಲೆಗಳ ಹೊಡೆತಗಳನ್ನು ತಪ್ಪಿಸಿಕೊಳ್ಳುವ ಬಗ್ಗೆ ಅರಿವಿಲ್ಲದೇ ಅನಾಹುತಗಳು ಆಗುವ ಸಾಧ್ಯತೆಗಳಿದ್ದು, ಇವುಗಳನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ನುರಿತ ಹಾಗೂ ಪರಿಣಿತ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದು ಒಂದು ಅಭಿನಂದನೀಯ ಕಾರ್ಯ ಎಂದರು.

ದೇಶದಲ್ಲಿಯೇ ಮಲ್ಪೆ ಬೀಚ್ ಅತ್ಯಾಕರ್ಷಣೀಯವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ದಿನೇ ದಿನೇ ಇಲ್ಲಿಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಬೀಚ್‌ನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಪ್ರವಾಸಿಗರ ಸುರಕ್ಷತೆಯ ಹಿತದೃಷ್ಠಿಯಿಂದ ಜೀವರಕ್ಷಕರನ್ನು ಮಲ್ಪೆ, ಮರವಂತೆ, ಕಾಪು, ತ್ರಾಸಿ, ಬೀಚ್‌ಗಳಲ್ಲಿ ನೇಮಿಸಲಾಗುತ್ತಿದೆ ಎಂದ ಅವರು, ಈಗಾಗಲೇ ಮೊದಲ ಹಂತದಲ್ಲಿ 17 ಜನ ಜೀವರಕ್ಷಕರಿಗೆ ತರಬೇತಿಯನ್ನು ನೀಡಲಾಗಿದ್ದು, ತಮ್ಮ ಕಾರ್ಯಕ್ಕೆ ಶೀಘ್ರದಲ್ಲಿಯೇ ನಿಯೋಜನೆಗೊಳ್ಳಲಿದ್ದಾರೆ ಎಂದರು.

ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದ೦ತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದ ಅವರು, ಪ್ರವಾಸಿ ತಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ನಗರಸಭೆ ಪೌರಾಯುಕ್ತ ರಾಯಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ಲೈಫ್ ಸೇವಿಂಗ್ಸ್ ಸೊಸೈಟಿಯಿಂದ ಮಾನ್ಯತೆ ಪಡೆದ ಪುತ್ತೂರಿನ ವಾರಾಣಾಸಿ ಡೆವಲಪ್ ಮೆಂಟ್ ಅಂಡ್ ರಿಸರ್ಚ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಜೀವ ರಕ್ಷಕ ತಂಡದವರಿಗೆ ಉತ್ತಮ ಈಜುಗಾರಿಕೆ, ಕೃತಕ ಉಸಿರಾಟ ನೀಡುವುದು, ಪ್ರಥಮಚಿಕಿತ್ಸೆ ನೀಡುವುದು, ಪ್ರಜ್ಞಾಹೀನರಿಗೆ ಸಾಗಿಸುವುದು ಸೇರಿದಂತೆ ಮತ್ತಿತರ ತರಬೇತಿಯನ್ನು ನೀಡುವುದರೊಂದಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.