logo
WhatsApp Image 2026-04-02 at 14.46.04.jpeg
hindalco everlast.jpeg

ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

ಟ್ರೆಂಡಿಂಗ್
share whatsappshare facebookshare telegram
16 Nov 2023
post image

ಉಡುಪಿ : ಜಿಲ್ಲೆಯಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಒಟ್ಟು 1,49,724 ಪಿಂಚಣಿದಾರರು ಮಾಸಿಕ ವೇತನ ಪಡೆಯುತ್ತಿದ್ದು, ಇವರುಗಳಲ್ಲಿ 1,47,371 ಪಿಂಚಣಿದಾರರ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಲಾಗಿದ್ದು, ಬಾಕಿ ಉಳಿದ ಪಿಂಚಣಿದಾರರು ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿರುವುದಿಲ್ಲ.

ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡದೇ ಇರುವ ಪಿಂಚಣಿದಾರರ ಖಾತೆಗೆ ನವೆಂಬರ್ ಮಾಹೆಯಿಂದ ಪಿಂಚಣಿ ಪಾವತಿಯನ್ನು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಈ ಕೂಡಲೇ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿ, ಮಾಸಿಕ ಪಿಂಚಣಿ ಪಾವತಿಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.