logo
WhatsApp Image 2026-04-02 at 14.46.04.jpeg
hindalco everlast.jpeg

ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
12 Oct 2023
post image

ಉಡುಪಿ:ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕ್‌ಗಳ ಸಜಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್‌ನಡಿ ಬೆಂಗಳೂರು-ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೆಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kssd.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ:080-22374832 ಅಥವಾ 805077005, 805077004 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.