logo
WhatsApp Image 2026-04-02 at 14.46.04.jpeg
hindalco everlast.jpeg

ವಿವಿಧ ಯೋಜನೆಯಡಿ ಸಾಲ ಸೌಲಭ್ಯ

ಟ್ರೆಂಡಿಂಗ್
share whatsappshare facebookshare telegram
7 Oct 2023
post image

ಉಡುಪಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯಗಳ ಜನರ ಅಭಿವೃದ್ಧಿಗಾಗಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ನಾಗರಿಕ ಸೇವಾಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvldcl.karnataka.gov.in ಅಥವಾ ನಿಗಮದ ದೂ. ಸಂಖ್ಯೆ: 080-22865522, ಮೊ.ನಂ: 9900012351 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.