logo
WhatsApp Image 2026-04-02 at 14.46.04.jpeg
hindalco everlast.jpeg

ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
6 Oct 2023
post image

ಉಡುಪಿ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಒಕ್ಕಲಿಗ ಸಮುದಾಯದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ, ಗ್ರಾಮಒನ್ http://gramaone.karnataka.gov.in, ಬೆಂಗಳೂರು ಒನ್ https://www.karnatakaone.gov.in ಹಾಗೂ ಕರ್ನಾಟಕ ಒನ್ https://k1app.karnatakaone.gov.in ನಲ್ಲಿ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಕೌಶಲ್ಯ ಕರ್ನಾಟಕ ತಂತ್ರಾAಶದ https://www.kaushalkar.com ಅಕ್ಟೋಬರ್ 30 ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdc.karnataka.gov.in ಅಥವಾ ಇ-ಮೇಲ್ mdkvcdc@gmail.com ಅಥವಾ ದೂ.ಸಂಖ್ಯೆ: 080-29904350, 29904268 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.