logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿಯ ಪೊಲೀಸ್ ವಸತಿ ಗೃಹದಲ್ಲಿ ಬೀಗ ಮುರಿದು ಕಳ್ಳತನ

ಟ್ರೆಂಡಿಂಗ್
share whatsappshare facebookshare telegram
24 Feb 2025
post image

ಉಡುಪಿ: ಇಲ್ಲ ಪೊಲೀಸ್ ವಸತಿ ಗೃಹಕ್ಕೆ ಸೋಮವಾರ ನಸುಕಿನ ವೇಳೆ ನುಗ್ಗಿದ ಕಳ್ಳರು ಕೆಲವು ಸೊತ್ತುಗಳನ್ನು ಕಳವು ಮಾಡಿದ್ದಾರೆ‌. ಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್ ವಸತಿ ಗೃಹದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ಮೂರು ವಸತಿ ಸಮುಚ್ಚಯದಲ್ಲಿ ಒಟ್ಟು 28 ಮನೆಗಳಿದ್ದು, ಇದರಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯಾದ ರಾಘವೇಂದ್ರ ಹಾಗೂ ರವಿರಾಜ್ ಎಂಬವರ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಕಪಾಟಿನ ಬೀಗ ತೆರೆದು ಸೊತ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದು ಕಂಡುಬಂದಿದೆ.

ರಾಘವೇಂದ್ರ ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನಲ್ಲಿ ತರಬೇತಿಯಲ್ಲಿದ್ದು, ಇವರ ಮನೆಯಲ್ಲಿ ಯಾರು ಇರಲಿಲ್ಲ. ಅದೇ ರೀತಿ ರವಿರಾಜ್ ಫೆ.23ರಂದು ತಡರಾತ್ರಿ ಮನೆಗೆ ಬೀಗ ಹಾಕಿ ಕರ್ತವ್ಯಕ್ಕೆ ತೆರಳಿದ್ದರು. ಈ ವೇಳೆ ನುಗ್ಗಿದ ಕಳ್ಳರು, ರಾಘವೇಂದ್ರ ಅವರ ಮನೆಯಲ್ಲಿದ್ದ ಬೆಳ್ಳಿಯ ಕಾಲುಗೆಜ್ಜೆ ಹಾಗೂ ಚಿಲ್ಲರೆ ಹಣವನ್ನು ಕಳವು ಮಾಡಿದ್ದಾರೆ. ರವಿರಾಜ್ ಮನೆಯಲ್ಲಿ ಯಾವುದೇ ಸೊತ್ತುಗಳು ಕಳವಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು ತನಿಖೆ ನಡೆಯುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.