



ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಅಬಕಾರಿ ಇಲಾಖೆ ವತಿಯಿಂದ 20,300 ರೂ. ಮೌಲ್ಯದ 22.250 ಲೀ. ಮದ್ಯ ವಶಪಡಿಸಿಕೊಳ್ಳಲಾಗಿರುತ್ತದೆ.
ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬoಧಿಸಿದoತೆ ಕಾಂಗ್ರೇಸ್ ಅಭ್ಯರ್ಥಿಯಾದ ಕೆ.ಜಯಪ್ರಕಾಶ್ ಹೆಗ್ಡೆರವರು ಕರಾವಳಿಗರ ಬಯಲು ಸೀಮೆ-ಮಲೆನಾಡ ಗಟ್ಟಿ ಧ್ವನಿ ಎಂಬ ಶೀರ್ಷಿಕೆಯ ಕರಪತ್ರಗಳನ್ನು ಮುದ್ರಿಸಿ, ಸಾರ್ವಜನಿಕವಾಗಿ ಉಡುಪಿಯಲ್ಲಿ ಹಂಚಿಕೆ ಮಾಡಲಾಗಿದ್ದು, ಕರಪತ್ರದಲ್ಲಿ ಪ್ರಕಾಶಕರ ಹೆಸರು, ಮುದ್ರಕರ ಹೆಸರು, ಮುದ್ರಣದ ವಿಳಾಸ ಹಾಗೂ ಮುದ್ರಿತ ಪ್ರತಿಗಳ ಸಂಖ್ಯೆ ಇತ್ಯಾದಿ ವಿವರಗಳನ್ನು ನಮೂದಿಸದೇ ಹಾಗೂ ಸಂಬoಧಪಟ್ಟ ಘೋಷಣೆ ಸಲ್ಲಿಸದೇ ಇರುವುದರಿಂದ ಮುದ್ರಕರು, ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಮಣಿಪಾಲ ಇವರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.