



ಬೆಂಗಳೂರು : ರಾಜ್ಯದ ವಿವಿಧ ಸರಕಾರಿ ಹುದ್ದೆಯಲ್ಲಿರುವ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ನಗದು, ಚಿನ್ನಾಭರಣಗಳು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ರಾಜ್ಯದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ 17 ಸರಕಾರಿ ಅಧಿಕಾರಿಗಳ ಕಚೇರಿ, ನಿವಾಸ ಸೇರಿದಂತೆ 70ಕ್ಕೂ ಹೆಚ್ಚು ಕಡೆ ಆಯಾ ನ್ಯಾಯಾಂಗ ವ್ಯಾಪ್ತಿಯ ಪೊಲೀಸರ ನೆರವಿನೊಂದಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ನಗದು, ಚಿನ್ನ, ಸ್ಥಿರಾಸ್ತಿ, ಐಷಾರಾಮಿ ವಾಹನಗಳು, ಭೂಮಿ ಮೇಲಿನ ಹೂಡಿಕೆ, ಷೇರುಗಳು ಮತ್ತು ದುಬಾರಿ ಗ್ಯಾಜೆಟ್‌ಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಬೆಂಗಳೂರು, ಮಂಡ್ಯ, ರಾಯಚೂರು, ಬೀದರ್, ಕಲಬುರಗಿ, ಚಿತ್ರದುರ್ಗ, ಬಳ್ಳಾರಿ, ತುಮಕೂರು, ಉಡುಪಿ, ಹಾಸನ, ಬೆಳಗಾವಿ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಿದೆ. 17 ಮಂದಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ, ಪರಿಶೀಲನೆ ಹಾಗೂ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಲೋಕಾಯುಕ್ತ) ಡಾ. ಎ. ಸುಬ್ರಹ್ಮಣ್ಯೇಶ್ವರ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.