



ಬೆಂಗಳೂರು ಸಮಸ್ತ ಕನ್ನಡಿಗರು ಸಂಭ್ರಮಿಸಿ ಹೆಮ್ಮೆಪಡುವಂತಹ ಆ ದಿನ ಬಂದೇ ಬಿಟ್ಟಿದೆ. ಜಾಗತಿಕ ಹೆಗ್ಗುರುತುಗಳಾಗಿ ‘ಪ್ರಪಂಚದ 7 ಅದ್ಭುತಗಳು’ ಇರುವ ರೀತಿಯಲ್ಲೇ ಇದೀಗ ಕರುನಾಡಿನ ಹೆಗ್ಗುರುತುಗಳಾಗಿ ‘ಕರ್ನಾಟಕದ 7 ಅದ್ಭುತಗಳು’ ಘೋಷಣೆಯಾಗಿದೆ. ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟ ತಾಣಗಳನ್ನು ನಾಡಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಕರ್ನಾಟಕದ 7 ಅದ್ಭುತಗಳು’ ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಪಂಚತಾರಾ ಹೋಟೆಲ್‌ವೊಂದರಲ್ಲಿ ಶನಿವಾರ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ‘ಕರ್ನಾಟಕದ 7 ಅದ್ಭುತ’ಗಳನ್ನು ಉದ್ಘೋಷಿಸಲಾಯಿತು. ಇದೇ ವೇಳೆ, ವಿಜೇತ ತಾಣಗಳಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪ್ರಮಾಣಪತ್ರ ಹಸ್ತಾಂತರಿಸಲಾಯಿತು. ನಾಡಿನ ಏಳು ಅದ್ಭುತ ತಾಣಗಳನ್ನು ಏಳು ವಿಭಾಗಗಳ ಅಡಿಯಲ್ಲಿ ಹೆಸರಿಸಲಾಗಿವೆ. ನಂತರ ಮಾತನಾಡಿದ ಬೊಮ್ಮಾಯಿ ಅವರು, ‘ಕರ್ನಾಟಕದ ಏಳು ಅದ್ಭುತಗಳು’ ಹೊಸ ಪ್ರವಾಸೋದ್ಯಮ ಮಾದರಿಗಳ ಸೃಷ್ಟಿಗೆ ದಿಕ್ಸೂಚಿಯಾಗಲಿವೆ. ಈ ಏಳು ಅಧಿಕೃತ ಅದ್ಭುತಗಳ ಪಟ್ಟಿಯಲ್ಲಿ ಒಂದಾಗಿರುವ ಹಿರೇಬಣಕಲ್ ಅಭಿವೃದ್ಧಿಗೆ ಸಮಗ್ರ ವರದಿ ಸಿದ್ಧಪಡಿಸಲು ಈಗಾಗಲೇ ಸೂಚಿಸಿದ್ದೇನೆ. ಜತೆಗೆ ಏಳೂ ಅದ್ಭುತಗಳ ಸ್ಥಳದಲ್ಲಿ ಆಗಬೇಕಿರುವ ಅಭಿವೃದ್ಧಿಗಳ ಬಗ್ಗೆ ನೀಲನಕ್ಷೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೇನೆ ಎಂದು ತಿಳಿಸಿದರು. ಕರ್ನಾಟಕದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಮಾತನಾಡಿ, ನಾನು ಪ್ರವಾಸೋದ್ಯಮ ಸಚಿವನಾದ ಬಳಿಕ ರಾಜ್ಯದ ಸಾಕಷ್ಟು ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಅದರ ಜತೆಗೆ ಇನ್ನಷ್ಟು ಕಾರ್ಯಗಳು ಆಗಬೇಕಿದೆ. ಏಳು ಅದ್ಭುತ ತಾಣಗಳ ಸಂರಕ್ಷಣೆ ನಿರಂತರವಾಗಿರಬೇಕು. ಆದರೆ, ನಾವಿನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆಗೆ ಹೋಗುತ್ತಿದ್ದೇವೆ. ಪಕ್ಷಗಳು ಅಧಿಕಾರಕ್ಕೆ ಬರುತ್ತವೆ ಹೋಗುತ್ತವೆ. ಕಾರ್ಯಾಂಗವು ಈ ತಾಣಗಳ ರಕ್ಷಣೆಯನ್ನು ಮುಂದುವರೆಸಿಕೊಂಡು ಹೋಗಬೇಕು. ಈ ಕಾರ್ಯಕ್ಕೆ ಜನತೆ ಸಹಕರಿಸಬೇಕು. ಸರ್ಕಾರ ಯಾವುದೇ ಇರಲಿ ಜಿಲ್ಲಾಧಿಕಾರಿಗಳು, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಇಂಥಹ ಹೊಣೆಗಾರಿಕೆ ನಿಭಾಯಿಸುವಲ್ಲಿ ಹಿಂದೆ ಬೀಳಬಾರದು ಎಂದರು. ‘ಕರ್ನಾಟಕದ 7 ಅದ್ಭುತಗಳು’ ಅಭಿಯಾನದ ರಾಯಭಾರಿ, ಖ್ಯಾತ ನಟ ರಮೇಶ್ ಅರವಿಂದ್ ಮಾತನಾಡಿ, ಪ್ರತಿವರ್ಷ ವಿಶ್ವ ಸುಂದರಿಯರು ಬದಲಾಗುತ್ತಾರೆ. ಆದರೆ, ಈ ಏಳು ಅದ್ಭುತಗಳೆಂದ ಈ ವಿಶ್ವ ಸುಂದರಿಯರು ನೂರಾರು ವರ್ಷಗಳಿಂದ ಸೌಂದರ್ಯ ಉಳಿಸಿಕೊಂಡಿವೆ. ಸರ್ವ ಕಾಲಕ್ಕೂ ಈ ಸೌಂದರ್ಯ ಹಾಗೇ ಇರಲಿದೆ ಎಂದರು. ಕೊಪ್ಪಳ ಜಿಲ್ಲಾಧಿಕಾರಿ ಸುಂದರೇಶ್ ಬಾಬು, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಹಾಸನ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ವಿಜಯಪುರ ಜಿಲ್ಲಾಧಿಕಾರಿ ಮಹಾಂತೇಶ್ ದಾನಮ್ಮನವರ್, ಮೈಸೂರು ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ, ಶಿವಮೊಗ್ಗ ಜಿಲ್ಲಾಧಿಕಾರಿಗಳ ಪರವಾಗಿ ಸಾಗರ ಉಪವಿಭಾಗಾಧಿಕಾರಿ ಪಲ್ಲವಿ, ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ವಿಜೇತ ತಾಣಗಳ ಪ್ರಮಾಣಪತ್ರ ಹಾಗೂ ಘೋಷಣಾ ಫಲಕ ಸ್ವೀಕರಿಸಿದರು. ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಕನ್ನಡಪ್ರಭ ದಿನಪತ್ರಿಕೆ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಸುದ್ದಿವಾಹಿನಿ ‘ಕರ್ನಾಟಕದ 7 ಅದ್ಭುತಗಳ’ ಆಯ್ಕೆಗೆ ಮಹಾ ಅಭಿಯಾನ ಕೈಗೊಂಡಿದ್ದವು. ತೀರ್ಪುಗಾರರಾಗಿ ರಾಜ್ಯ ಸ್ಟಾರ್ಟಪ್ ವಿಷನ್ ಗ್ರೂಪ್‌ನ ಅಧ್ಯಕ್ಷ, ಉದ್ಯಮಿ ಪ್ರಶಾಂತ್ ಪ್ರಕಾಶ್, ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ಸಂಗೀತಗಾರ ರಿಕ್ಕಿ ಕೇಜ್; ವೈಲ್ಡ್ ಕರ್ನಾಟಕ, ಗಂಧದ ಗುಡಿ ಚಿತ್ರಗಳ ನಿರ್ದೇಶಕ ಅಮೋಘವರ್ಷ; ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ, ಇತಿಹಾಸತಜ್ಞ ಡಾ|ದೇವರಕೊಂಡ ರೆಡ್ಡಿ, ವಿಶ್ವವಿಖ್ಯಾತ ವೇಗದ ಚಿತ್ರ ಕಲಾವಿದ ವಿಲಾಸ್ ನಾಯಕ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜಿ.ಜಗದೀಶ್; ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಧ್ಯಮ ಸಂಸ್ಥೆಗಳ ಪ್ರಧಾನ ಸಂಪಾದಕ ರವಿ ಹೆಗಡೆ ಪಾಲ್ಗೊಂಡಿದ್ದರು.
ಇವು ಆ 7 ಅದ್ಭುತಗಳು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.