logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು: ಬೈಕ್ ಗೆ ಲಾರಿ ಢಿಕ್ಕಿ: ಸವಾರ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
23 Jan 2022
post image

ಕಾಪು: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾಪು ತಾಲೂಕಿನ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ.

ಮೃತರನ್ನು ಗಣೇಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಮೃತ ಗಣೇಶ್ ಆಚಾರ್ಯ ಪಲ್ಸರ್ ಬೈಕ್ ನಲ್ಲಿ ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಬೈಕ್ ಸಮೇತವಾಗಿ ರಸ್ತೆಗೆ ಎಸೆಯಲ್ಪಟ್ಟ ಗಣೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿದರೂ ಮಾರ್ಗ ಮಧ್ಯೆ ಗಣೇಶ್ ಆಚಾರ್ಯ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.