logo
WhatsApp Image 2026-04-02 at 14.46.04.jpeg
hindalco everlast.jpeg

ಹೊಟೇಲ್ ವ್ಯವಹಾರದಲ್ಲಿ ನಷ್ಟ: ಬೈಕಾಡಿಯಲ್ಲಿ ಯುವ ಉದ್ಯಮಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
10 May 2022
post image

ಬ್ರಹ್ಮಾವರ : ಹೊಟೇಲ್ ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಮನನೊಂದ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಕಾಡಿ ಗ್ರಾಮದ ಗಾಂಧಿ ನಗರ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಗಾಂಧಿ ನಗರ ನಿವಾಸಿ ಪ್ರಭಾಕರ ಶೆಟ್ಟಿಗಾರ್ ಎಂಬವರ ಪುತ್ರ 27 ವರ್ಷದ ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಇವರು ಸುಮಾರು ಒಂದೂವರೆ ವರ್ಷದ ಹಿಂದೆ ಹಾಸನದಲ್ಲಿ ಸುಮಾರು 14 ಲಕ್ಷ ಖರ್ಚು ಮಾಡಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಆದರೆ ಹೊಟೇಲ್ ವ್ಯವಹಾರದಲ್ಲಿ ನಷ್ಟ ಉಂಟಾಗಿ, ಕಳೆದ 6 ತಿಂಗಳಿಂದ ಮನೆಯಲ್ಲಿಯೇ ಇದ್ದು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದರು.

ವ್ಯವಹಾರದಲ್ಲಿನ ನಷ್ಟದಿಂದ ಖಿನ್ನತೆಗೆ ಒಳಗಾಗಿ ಮನನೊಂದ ಇವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.