logo
WhatsApp Image 2026-04-02 at 14.46.04.jpeg
hindalco everlast.jpeg

ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ

ಟ್ರೆಂಡಿಂಗ್
share whatsappshare facebookshare telegram
4 Jul 2023
post image

ನವದೆಹಲಿ: ವಿದ್ಯುತ್ ದರ ಏರಿಕೆಯಿಂದ ಹೈರಾಣಾಗಿದ್ದ ವಾಣಿಜ್ಯ ಉದ್ಯಮಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 7 ರೂಪಾಯಿ ಹೆಚ್ಚಿಸಿವೆ.

ಮೂರು ತಿಂಗಳ ಬಳಿಕ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂ. ಇದ್ದದ್ದು, ಈಗ 1,780 ರೂ. ಆಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸತತ ಬೆಲೆ ಕುಸಿತದ ನಂತರ ವಾಣಿಜ್ಯ ಎಲ್ಪಿಜಿ ಗೆ ಮೊದಲ ಬಾರಿ ಬೆಲೆ ಏರಿಕೆಯಾಗಿದೆ. ಮೇ ತಿಂಗಳಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ದೆಹಲಿಯಲ್ಲಿ 171.5 ರೂ.ನಷ್ಟು ಕಡಿಮೆಯಾಗಿತ್ತು. ಹೀಗಾಗಿ ಪ್ರತಿ ಸಿಲಿಂಡರ್‌ ಬೆಲೆ 2,028 ರೂ. ಇದ್ದದ್ದು, 1,856.5 ರೂ.ಗೆ ಆಗಿತ್ತು. ಈಗ 7 ರೂಪಾಯಿ ಏರಿಕೆಯಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.