



ಉಡುಪಿ: ಆ್ಯತ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ಆ್ಯತ್ಲೆಟಿಕ್ ಅಸೋಸಿಯೇಶನ್ ಹಾಗೂ ಜಿಲ್ಲಾ ಅಮೆಚೂರ್ ಆ್ಯತ್ಲೆಟಿಕ್ ಸಂಸ್ಥೆಯ ಆಶ್ರಯದಲ್ಲಿ ಹಾಗೂ ನಿಟ್ಟೆ ವಿದ್ಯಾಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾ. 10ರಿಂದ 12ರ ವರೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ 18ನೇ ರಾಷ್ಟ್ರೀಯ ಯೂತ್ ಆ್ಯತ್ಲೆಟಿಕ್ ಚಾಂಪಿಯನ್‌ಶಿಪ್-2023 ನಡೆಯಲಿದೆ ಎಂದು ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಹೇಳಿದರು. ಈ ಕ್ರೀಡಾಕೂಟದಲ್ಲಿ ದೇಶದ 28 ರಾಜ್ಯ, 8 ಕೇಂದ್ರಾಡಳಿತ ಪ್ರದೇಶಗಳಿಂದ 1,200ರಷ್ಟು ಕ್ರೀಡಾಪಟುಗಳು, 25 ತಾಂತ್ರಿಕ ಅಧಿಕಾರಿಗಳು, 125 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ. 100 ಸ್ವಯಂಸೇವಕರು ಕಾರ್ಯ ನಿರ್ವಹಿಸಲಿದ್ದಾರೆ ಎಂದರು.
ಮಾ. 10ರ ಸಂಜೆ ಜೋಡುಕಟ್ಟೆಯಿಂದ ಕ್ರೀಡಾಜ್ಯೋತಿ ಸಹಿತ ಬೃಹತ್ ಮೆರವಣಿಗೆ ನಡೆಯಲಿದೆ. 40 ವಿಭಾಗಗಳಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ರಾಷ್ಟ್ರೀಯ ಮಟ್ಟದ ಚಾಂಪಿಯನ್‌ಶಿಪ್ ಉಡುಪಿಯಲ್ಲಿ ನಡೆಯುತ್ತಿರುವುದು ಇದೇ ಮೊದಲು. 80 ಲಕ್ಷ ರೂ. ವೆಚ್ಚದಲ್ಲಿ ಕ್ರೀಡಾಕೂಟ ನಡೆಸಲು ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಅಗತ್ಯ ಪರಿಕರಗಳನ್ನು ಬೆಂಗಳೂರಿನಿಂದ ತರಿಸಲು ಇಲಾಖೆಯ ಆಯುಕ್ತರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ಶಾಸಕರು ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.