logo
WhatsApp Image 2026-04-02 at 14.46.04.jpeg
hindalco everlast.jpeg

ಜಿಲ್ಲೆಯಲ್ಲಿ ಮಾ. 21 ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

ಟ್ರೆಂಡಿಂಗ್
share whatsappshare facebookshare telegram
15 Mar 2022
post image

ಉಡುಪಿ,:: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ಅನ್ವಯ ಜಿಲ್ಲೆಯಾದ್ಯಂತ ಮಾರ್ಚ್ 21 ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. ಈ ಸಂದರ್ಭದಲ್ಲಿ ಶಾಲಾ, ಕಾಲೇಜು ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಸಮವಸ್ತç ವಿವಾದದ ಕುರಿತು ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಬ್ಯಾನರ್ ಅಳವಡಿಸುವುದು, ಸಭೆ ಹಾಗೂ ಸಮಾರಂಭಗಳನ್ನು ನಡೆಸುವುದು, ಪಟಾಕಿಗಳನ್ನು ಸಿಡಿಸುವುದು, ದೈಹಿಕ ಹಿಂಸೆಯನ್ನುAಟು ಮಾಡುವ ವಸ್ತುಗಳನ್ನು ಒಯ್ಯುವುದು ಮತ್ತು ಶಾಲಾ, ಕಾಲೇಜುಗಳ ಆವರಣದಲ್ಲಿ ಮುಖ್ಯಸ್ಥರ ಪೂರ್ನಾನುಮತಿ ಇಲ್ಲದೇ ಯಾವುದೇ ಅಪರಿಚಿತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.