



ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ನೇಮಕ
ಮಂಗಳೂರು: ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ಮಂಗಳವಾರ ನೇಮಕ ಮಾಡಿದೆ.
ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇವರು ಸದ್ಯ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಧಾರವಾಡ ಬಿಸಿಎಂ ಅಧಿಕಾರಿಯಾಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದರು. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.