logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಟ್ರೆಂಡಿಂಗ್
share whatsappshare facebookshare telegram
12 Oct 2023
post image

ಉಡುಪಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವೈಭವದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಸೂಚನೆ ನೀಡಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.

ಕಾರ್ಯಕçಮಕ್ಕೆ ಜನಪ್ರನಿಧಿಗಳು, ಗಣ್ಯರು ಸೇರಿದಂತೆ ಶಿಷ್ಠಾಚಾರದಂತೆ ಎಲ್ಲರನ್ನೂ ಆಹ್ವಾನಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಅಂದು ಬೆಳಗ್ಗೆ 8 ಗಂಟೆಗೆ ಬೋರ್ಡ್ ಹೈಸ್ಕೂಲ್‌ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು. ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ನಗರಸಭೆ ಪೌರಾಯುಕ್ತ ರಾಯಪ್ಪ, ಡಿ.ಡಿ.ಪಿ.ಐ ಗಣಪತಿ ಕೆ ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.