logo
WhatsApp Image 2026-04-02 at 14.46.04.jpeg
hindalco everlast.jpeg

ಮಾಳ: ಉಸಿರಾಟದ ಸಮಸ್ಯೆ ಉಲ್ಬಣಿಸಿ ವ್ಯಕ್ತಿ ಸಾವು

ಟ್ರೆಂಡಿಂಗ್
share whatsappshare facebookshare telegram
2 Jan 2023
post image

ಕಾರ್ಕಳ: ಉಸಿರಾಟದ ಸಮಸ್ಯೆ ಉಲ್ಬಣಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಮಾಳ ಗ್ರಾಮದ ನಿವಾಸಿ 66ವರ್ಷದ ಕೆ. ಪೂವಯ್ಯ ಎಂದು ಗುರುತಿಸಲಾಗಿದೆ. ಇವರು ನಾಲ್ಕು ದಿನದಿಂದ ಜ್ವರದಿಂದ ಬಳಲುತ್ತಿದ್ದರು. ಬಜಗೋಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬರಲಾಗಿದೆ. ಇಂದು ಮುಂಜಾನೆ ಏಕಾಏಕಿ‌ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣವೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಪೂವಯ್ಯ ನಾಯ್ಕ್ ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.