logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮಲಬಾರ್ ವಿಶ್ವರಂಗ ಪುರಸ್ಕಾರ 2023

ಟ್ರೆಂಡಿಂಗ್
share whatsappshare facebookshare telegram
19 Mar 2023
post image

ಉಡುಪಿ: ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಮಾ. 26ರಂದು ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ 'ಮಲಬಾರ್ ವಿಶ್ವರಂಗ ಪುರಸ್ಕಾರ 2023 ' ಪ್ರದಾನ ಮಾಡಲಾಗುವುದು.

ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳಾದ ಮೂರ್ತಿ ದೇರಾಜೆ (ರಂಗ ನಿರ್ದೇಶಕರು), ಶೋಭಾ ವೆಂಕಟೇಶ್ , ಬೆಂಗಳೂರು (ಮಕ್ಕಳ ರಂಗಭೂಮಿ) , ಎಂ.ಎಸ್. ಭಟ್ ಉಡುಪಿ ( ರಂಗ ನಟ) , ಮೋಹನ್ ಮಾರ್ನಾಡ್ ಮುಂಬೈ (ರಂಗ ನಟ ಹೊರ ರಾಜ್ಯ), ಪ್ರಕಾಶ್ ನೊರೋನ್ಹ ಪಾಂಬೂರು (ರಂಗ ಸಂಘಟಕರು) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ 'ಮಲಬಾರ್ ವಿಶ್ವರಂಗ ಪುರಸ್ಕಾರ-2023' ಪ್ರದಾನ ಮಾಡಲಾಗುವುದು .

ಸಮಾರಂಭದ ಸಭಾಧ್ಯಕ್ಷತೆಯನ್ನು ನಾಡಿನ ಹಿರಿಯ ವಿಮರ್ಶಕ ಪ್ರೊ. ಮುರಳೀಧರ ಉಪಾಧ್ಯಾ* ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಹಿರಿಯ ರಂಗಕರ್ಮಿ ಲಾವಣ್ಯ ಬೈಂದೂರಿನ ಗಣೇಶ್ ಕಾರಂತ್ ಹಾಗೂ ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ತಲ್ಲೂರು ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿರುತ್ತಾರೆ . ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಯುವ ಸಂಚಯದಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಭಾ ಕಾರ್ಯಕ್ರಮಕ್ಕಿಂತ ಮೊದಲು ನಡೆಯಲಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.