



ಕೇರಳ: ಮಲಯಾಳಂ ಸಿನಿಮಾ ನಟ ಹಾಗೂ ಮಾಜಿ ಸಂಸದ ಇನೋಸೆಂಟ್ (75) ಮಾ.26ರಂದು ಕೇರಳದ ಕೊಚ್ಚಿಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕೋವಿಡ್ 19 ಸಂಬಂಧಿತ ಉಸಿರಾಟದ ಸಮಸ್ಯೆಗಳು ಮತ್ತು ಬಹು ಅಂಗಾಂಗ ವೈಫಲ್ಯದಿಂದಾಗಿ ಮೃತಪಟ್ಟರು ಎಂದು ಆಸ್ಪತ್ರೆಯ ವರದಿ ತಿಳಿಸಿದೆ.
ಇನೋಸೆಂಟ್ ಅವರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದು, ಕೊನೆಯದಾಗಿ 2022ರಲ್ಲಿ ತೆರೆ ಕಂಡಿದ್ದ ಪೃಥ್ವಿರಾಜ್ ಸುಕುಮಾರನ್ ಅವರ ‘ಕಡುವ’ ಚಿತ್ರದಲ್ಲಿಯೂ ನಟಿಸಿದ್ದರು.
ಇದೀಗ ಇವರ ನಿಧನಕ್ಕೆ ತಾರೆಯರು, ರಾಜಕಾರಣಿಗಳು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.