logo
WhatsApp Image 2026-04-02 at 14.46.04.jpeg
hindalco everlast.jpeg

ಮಲ್ಪೆ: ವ್ಯವಹಾರದಲ್ಲಿ ನಷ್ಟ: ಕಡೆಕಾರಿನಲ್ಲಿ ವ್ಯಕ್ತಿ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
28 Aug 2022
post image

ಮಲ್ಪೆ:

ವ್ಯವಹಾರದಲ್ಲಿ ನಷ್ಟ ಉಂಟಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯೊಬ್ಬರು ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕಡೆಕಾರಿನಲ್ಲಿ ಆ.27ರಂದು ನಡೆದಿದೆ. ಕಡೆಕಾರು ನಿವಾಸಿ 54ವರ್ಷದ ಉಮೇಶ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಗೋವಾದಲ್ಲಿ ವ್ಯವಹಾರ ನಡೆಸುತ್ತಿದ್ದು, ವ್ಯವಹಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಊರಿಗೆ ವಾಪಾಸಾಗಿದ್ದರು. ಆರ್ಥಿಕ ಸಂಕಷ್ಟದಿಂದ ಮನನೊಂದ ಅವರು, ನಿನ್ನೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಮ್ಮ ಶೈಲೇಶ್ ಎಮ್. ಹೆಗ್ಡೆ ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.