



ಮಲ್ಪೆ : ಪಡುಕರೆಯ ಶ್ರೀ ಶನೇಶ್ವರ ಪೂಜಾ ಮಂದಿರದ ಬಳಿಯ ಪಾಪನಾಶಿನಿ ಹೊಳೆಯಲ್ಲಿ ಇಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ. ಮೃತದೇಹ ಗುರುತು ಪತ್ತೆಯಾಗಿಲ್ಲ. ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟಿರಬಹುದು ಅಥವಾ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಮೇಲೆತ್ತಿ ದಡಕ್ಕೆ ತಂದಿದ್ದಾರೆ. ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಶವಗಾರದಲ್ಲಿ ಇಡಲಾಗಿದೆ. ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.