



ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರವು ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ’ಯನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸುವುದನ್ನು ನಿಷೇಧಿಸಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿವಾದಾತ್ಮಕ ಚಿತ್ರದ ಪದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಆದೇಶ ಹೊರಡಿಸಿದ್ದಾರೆ.
ದ್ವೇಷ ಮತ್ತು ಹಿಂಸಾಚಾರದ ಘಟನೆಗಳನ್ನು ತಪ್ಪಿಸಿ ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ಪಶ್ಚಿಮ ಬಂಗಾಳ ಸರ್ಕಾರವು ಕೇರಳ ಸ್ಟೋರಿ ಚಲನಚಿತ್ರವನ್ನು ನಿಷೇಧಿಸಲು ನಿರ್ಧರಿಸಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಕಾಶ್ಮೀರ ಫೈಲ್ಸ್ ಎಂಬುದು ಒಂದು ಪ್ರದೇಶವನ್ನು ಅವಮಾನಿಸುತ್ತದೆ. ಅಂತೆಯೇ ದಿ ಕೇರಳ ಸ್ಟೋರಿ ಚಲನಚಿತ್ರವು ತಿರುಚಿದ ಕಥೆಯಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಯಾವುದೇ ಥಿಯೇಟರ್‌ನಲ್ಲಿ ಚಿತ್ರ ಪ್ರದರ್ಶನ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳದ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಅದೇ ರೀತಿ ತಮಿಳುನಾಡಿನಲ್ಲಿಯೂ ಈ ಚಿತ್ರಪದರ್ಶನ ಮಾಡದಂತೆ ತಮಿಳುನಾಡು ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಮಾಲೀಕರ ಸಂಘ ನಿರ್ಧಾರ ಕೈಗೊಂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.