logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು: ಆ್ಯಂಬುಲೆನ್ಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
6 Nov 2021
post image

ಕಾಪು: ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಪುವಿನ ಕೋತಲ್ ಕಟ್ಟೆಯ‌ ರಾ.ಹೆ. 66ರಲ್ಲಿ‌‌ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ. ಗೋವಿಂದ ಪೂಜಾರಿ ರಸ್ತೆ ದಾಟಲು ನಿಂತಿದ್ದರು. ಈ ವೇಳೆ ಅವರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಘಟನೆಯಲ್ಲಿ ಆ್ಯಂಬುಲೆನ್ಸ್ ಚಾಲಕ ಮಣಿ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.