logo
WhatsApp Image 2026-04-02 at 14.46.04.jpeg
hindalco everlast.jpeg

ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಮನನೊಂದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
14 Sept 2021
post image

ಉಡುಪಿ: ಉಡುಪಿ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಮನನೊಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಮೃತ ಮಹಿಳೆಯನ್ನು ಆಶಾ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದುಬಂದಿದೆ. ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಕಣ್ಣುಗಳು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ಸಹಕರಿಸಿದರು. ಘಟನಾ ಸ್ಥಳಕ್ಕೆ ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಕಾರ್ಯದರ್ಶಿ ರಕ್ಷಿತಾ ಶೆಟ್ಟಿ, ಹಾಗೂ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಗ್ರಾಹಕ ಸಂಪರ್ಕ ಅಧಿಕಾರಿ ಹಫೀಜ್ ರೆಹಮಾನ್ ಆಗಮಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.