



ಮೈಸೂರು: ಪ್ರಸಿದ್ಧ ಪ್ರವಾಸಿ ತಾಣ ಕುಲು ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ.
ಪ್ರವಾಸಕ್ಕೆ ಹೋಗಿರುವ ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ಮೈಸೂರಿನ ನಿವಾಸಿಗಳಾಗಿದ್ದು, ಪ್ಯಾಕೇಜ್ ಟೂರ್ ನಲ್ಲಿ ಕುಲು ಮನಾಲಿ ಪ್ರವಾಸಕ್ಕೆಂದು ಕಳೆದ ಗುರುವಾರ ಮೈಸೂರಿನಿಂದ ಹೊರಟಿದ್ದರು. ಪ್ರವಾಸಕ್ಕೆ ಹೋದ ಮೇಲೆ ಭಾನುವಾರ ಕೊನೆಯ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದು, ಮಳೆ ಜಾಸ್ತಿ ಇದೆ, ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ನಾವು ಕೊಠಡಿಯಲ್ಲಿ ಸುರಕ್ಷಿತವಾಗಿದ್ದೇವೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು.
ಅದಾದ ಬಳಿಕ ಇದುವರೆಗೂ ಯಾರೊಬ್ಬರ ಬಗ್ಗೆಯೂ ಮಾಹಿತಿ ಇಲ್ಲ. ಈ ಬಗ್ಗೆ ಮನೆಯವರು ಆತಂಕಗೊಂಡಿದ್ದು, ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿ ಸುರಕ್ಷಿತವಾಗಿ ಕರೆತರುವಂತೆ ಮನವಿ ಮಾಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.