logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಪಟ್ಟಿ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರದ ಚಿಂತನೆ

ಟ್ರೆಂಡಿಂಗ್
share whatsappshare facebookshare telegram
22 Oct 2026
post image

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚದಲ್ಲಿ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವುದರ ಜೊತೆಗೆ, ಪ್ರಮುಖ ಚಿಕಿತ್ಸೆಗಳ ಏಕರೂಪದ ದರ ನಿಗದಿಪಡಿಸುವ ಬಗ್ಗೆಯೂ ಗಂಭೀರ ಚಿಂತನೆ ನಡೆಸುತ್ತಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ರೀತಿಯ ಚಿಕಿತ್ಸೆಗೆ ವಿಭಿನ್ನ ದರ ವಿಧಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. ಚಿಕಿತ್ಸೆ ಆರಂಭಿಸುವ ಮೊದಲೇ ಅದರ ವೆಚ್ಚದ ಮಾಹಿತಿ ರೋಗಿಗಳಿಗೆ ಲಭ್ಯವಾಗಬೇಕು ಹಾಗೂ ಆಸ್ಪತ್ರೆಗಳ ಬಿಲ್‌ಗಳ ಬಗ್ಗೆ ಸ್ಪಷ್ಟತೆ ಇರಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಯು.ಟಿ. ಖಾದರ್‌, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ತಿಳಿಸಿದ್ದಾರೆ. ಪ್ರಮುಖ ಚಿಕಿತ್ಸೆಗಳ ದರಗಳನ್ನು ವಿವಿಧ ಬಣ್ಣಗಳಲ್ಲಿ ಸ್ಪಷ್ಟವಾಗಿ ಕಾಣುವಂತೆ ಫಲಕದಲ್ಲಿ ಪ್ರದರ್ಶಿಸಬೇಕು. ಉಳಿದ ಚಿಕಿತ್ಸೆಗಳ ದರಗಳನ್ನು ಲೆಡ್ಜರ್‌ನಲ್ಲಿ ದಾಖಲಿಸಬೇಕು ಎಂದು ಹೇಳಿದ್ದಾರೆ.

ಈ ಸಂಬಂಧ ಖಾಸಗಿ ಆಸ್ಪತ್ರೆಗಳ ಸಂಘದ ಪ್ರತಿನಿಧಿಗಳೊಂದಿಗೆ ಇಂದು ಅಥವಾ ನಾಳೆ ಸಭೆ ನಡೆಸಲಾಗುವುದು. ಸಭೆಯ ಬಳಿಕ ಚಿಕಿತ್ಸಾ ದರಪಟ್ಟಿ ಕಡ್ಡಾಯಗೊಳಿಸುವ ದಿನಾಂಕವನ್ನು ಪ್ರಕಟಿಸಲಾಗುವುದು. ಈ ಕುರಿತು ಸರ್ಕಾರ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಅಂತಾರಾಷ್ಟ್ರೀಯ ಕಂಪನಿಗಳ ಹೂಡಿಕೆ ವಿಚಾರವಾಗಿಯೂ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.