logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು!

ಟ್ರೆಂಡಿಂಗ್
share whatsappshare facebookshare telegram
6 Dec 2025
post image

ಮಂಗಳೂರು: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ.

ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅವರಿಗೆ ತಂದೆ, ತಾಯಿ, ಸಹೋದರ, ಸಹೋದರಿ ಇದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.