



ಮಂಗಳೂರು: ಇಲ್ಲಿನ ಕಂಕನಾಡಿ ಬಳಿ ಪಾರ್ಕಿಂಗ್ ಮಾಡಿದ ಕಾರಿನಲ್ಲಿ ಶವವೊಂದು ಪತ್ತೆಯಾದ ಘಟನೆ ಅ.12 ರಂದು ನಡೆದಿದೆ.
ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ (44)ಎಂದು ಗುರುತಿಸಲಾಗಿದೆ.
ಮೃತರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು, ಇಂದು ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಬಿದ್ದಿರುವುದು ಕಂಡುಬಂದಿತ್ತು.
ವರದಿಗಳ ಪ್ರಕಾರ, ನಿನ್ನೆ ಚಿಕಿತ್ಸೆಗೆ ಹೋಗುವುದಾಗಿ ಹೇಳಿ ಪ್ರಶಾಂತ್ ಅವರದ್ದೇ ಕಾರಿನಲ್ಲಿ ಮನೆಯಿಂದ ಹೊರಟಿದ್ದರು. ಆದರೆ, ಮನೆಗೆ ಬಾರದೇ ಇದ್ದಾಗ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಗ ಕಂಕನಾಡಿಯ ಹೊಟೇಲ್ ಬಳಿ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದು ಪ್ರಶಾಂತ್ ಅವರದ್ದು ಎಂದು ತಿಳಿದುಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.