



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಗೆಯ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅನಧಿಕೃತ ಮರಳುಗಾರಿಕೆಗೆ ಸಂಬಂಧಿಸಿದಂತೆ, ಯಾವುದೇ ದೂರು ನೀಡಬೇಕಾದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932 ಸಂಪರ್ಕಿಸಬಹುದು.
ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.com ಆ್ಯಪ್ ತಂತ್ರಾಂಶವನ್ನು ಪುನರ್ ಸ್ಥಾಪಿಸಲಾಗಿದೆ. ಜನವರಿ 02 ರಿಂದ ಸಾರ್ವಜನಿಕರು ಈ ಆ್ಯಪ್‍ನ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.