



ಮಂಗಳೂರು: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಪ್ರಕರಣಕ್ಕೆ ಸಂಬಂಧಿಸಿದಂತೆ ಮಗು, ತಂದೆ ಹಾಗೂ ತಾಯಿಯ ಡಿಎನ್‌ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿದ್ದು ಸತ್ಯಾಂಶ ಹೊರಬೀಳಲಿದೆ..
ಮಗು ಅದಲು ಬದಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದಾರೆ ಕುಂದಾಪುರ ನಿವಾಸಿ ಮುಸ್ತಾಫ ಎಂಬವರು ನೀಡಿದ ದೂರಿನ ಆಧಾರದಲ್ಲಿ ಬಂದರು ಪೊಲೀಸ್ ಠಾಣೆಯಲ್ಲಿ ಮಗು ಅಪಹರಣ ದೂರು ದಾಖಲಾಗಿತ್ತು.
ನ್ಯಾಯಾಲಯ ನೀಡಿದ ಸೂಚನೆ ಮೇರೆಗೆ ಅ.19ರಂದು ಮಗು ಹಾಗೂ ಪೋಷಕರ ಡಿಎಎನ್ ಪರೀಕ್ಷೆಯಾಗಲಿದೆ. ಬಳಿಕ ಇದರ ಸ್ಯಾಂಪಲ್‌ನ್ನು ಹೈದರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಮೂರು ತಿಂಗಳೊಳಗೆ ಇದರ ವರದಿ ಬರಲಿದ್ದು, ಈ ವರದಿ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ ಪೊಲೀಸರು ತಿಳಿಸಿದ್ದಾರೆ.
ಘಟನೆ ವಿವರ: : ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ತಾಯಿಗೆ ಗಂಡು ಮಗು ನೀಡಿ ಸಾಗ ಹಾಕಿದ್ದ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯ ಮಹಾ ಎಡವಟ್ಟು ಬದಲಾಗಿತ್ತು. ಆಸ್ಪತ್ರೆಯ ಪೋಷಕರು ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದರು. ಕುಂದಾಪುರ ಮೂಲದ ಅಮ್ರಿನ್ ಎಂಬವರು ಸೆಪ್ಟಂಬರ್ 27 ರಂದು ಹೆರಿಗೆಗಾಗಿ ದಾಖಲಾಗಿದ್ದು, ತಡರಾತ್ರಿ 12 ಗಂಟೆ ಹೆರಿಗೆ ಆಗಿದ್ದು,ಆಸ್ಪತ್ರೆ ದಾಖಲಾತಿ ಪ್ರಕಾರ ಮಗುವನ್ನು ‘ಹೆಣ್ಣು’ ಎಂಬುದಾಗಿ ನಮೂದಿಸಿದ್ದು ವಿಚಾರ ಬೆಳಕಿಗೆ ಬಂದಿತ್ತು ಪೋಷಕರು ಮಗು ಹಾಗೂ ತಾಯಿಯನ್ನು ಡಿಸ್ಚಾರ್ಜ್ ಮಾಡುವಂತೆ ತಿಳಿಸಿದ್ದು, ಮಗುವಿಗೆ ಮಲ ವಿಸರ್ಜನೆ ಸಮಸ್ಯೆ ಇರುವುದಾಗಿ ಲೇಡಿಗೋಶನ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ತಕ್ಷಣವೇ ಬ್ರಹ್ಮಾವರ ಮಹೇಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಅಮ್ಬ್ರೀನ್ ಪತಿ ಮುಸ್ತಫಾ ನಿರ್ಧರಿಸಿದ್ದರು. ಅಂತೆಯೇ, ಬ್ರಹ್ಮಾವರಕ್ಕೆ ಕೊಂಡೊಯ್ಯಲಾಗಿದ್ದು ಅಲ್ಲಿ ಮಗು ಬದಲಾಯಿಸಿ ಕೊಟ್ಟಿರುವ ವಿಚಾರ ಬಯಲಾಗಿತ್ತು. ಮಗುವಿನ DNA ಪರೀಕ್ಷೆ ನಡೆಸಿ ನ್ಯಾಯ ಒದಗಿಸುವಂತೆ ಪಟ್ಟು ಹಿಡಿದಿದ್ದರು.ಬಂದರು ಠಾಣೆ ಯಲ್ಲಿ ಮಗು ಅಪಹರಣ ಪ್ರಕರಣ ಕೂಡ ಎನ್ನಲಾಗಿತ್ತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.