logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು ದಸರಾ ಸಂಭ್ರಮ: ಮನೆಗೆ ವಾಪಾಸಾಗುತಿದ್ದಾಗ ಅಪಘಾತ : ಇಬ್ಬರ ಸಾವು..!

ಟ್ರೆಂಡಿಂಗ್
share whatsappshare facebookshare telegram
16 Oct 2021
post image

ಮಂಗಳೂರು: ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೆ.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಕಾಸರಗೋಡಿನ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.