



ಮಂಗಳೂರು:ಉಡುಪಿಯ ಮಲ್ಪೆ ಬಂದರಿನಿಂದ ಉಳ್ಳಾಲಕ್ಕೆ ಮೀನು ಸಾಗಿಸುತ್ತಿದ್ದ ಪಿಕಪ್ ವಾಹನದ ಟಯರ್ ಸಿಡಿದು ವಾಹನ ಪಲ್ಟಿಯಾಗಿದೆ. ಈ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.
ಇದರಿಂದ ವಾಹನವು ನೇತ್ರಾವತಿ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಪಿಕಪ್ ವಾಹನ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಇತರ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.